
ಬೆಂಗಳೂರು, ಮೇ 31-ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಣ ಬಲದ ಮುಂದೆ ಏನು ನಡೆಯುವುದಿಲ್ಲ ಎಂಬುದನ್ನು ಈ ಫಲಿತಾಂಶ ಸಾಬೀತು ಮಾಡಿದೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್.ಆರ್ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಸೋಲಿಗೆ ಬೇಸರ ವ್ಯಕ್ತಪಡಿಸಿ, ಜನರ ತೀರ್ಮಾನಕ್ಕೆ ತಲೆಬಾಗಲೇಬೇಕು ಎಂದು ಹೇಳಿದರು.
ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಒಳಒಪ್ಪಂದಗಳು ಮಾಡಿಕೊಂಡಿರುವ ಕುರಿತು ಚರ್ಚೆ ಮಾಡುವ ಅಗತ್ಯವೇ ಇಲ್ಲ. ಅದು ಎಲ್ಲರಿಗೂ ಗೊತ್ತಿರುವ ವಿಷಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.