ಚಿತ್ರದುರ್ಗ, ಮೇ 31- ಸಿಡಿಮದ್ದು ಕಡಿದು ಕರಡಿಯೊಂದು ಸಾವನ್ನಪ್ಪಿರುವ ಘಟನೆ ಮಾವಿನಕಟ್ಟೆ ಗ್ರಾಮದ ಬಳಿ ನಡೆದಿದೆ. ಕಾಡುಪ್ರಾಣಿಗಳ ಬೇಟೆಗೆ ಇಡಲಾಗಿದ್ದ ಸಿಡಿಮದ್ದನ್ನು ಆಹಾರವನ್ನರಸಿಕೊಂಡು ಬಂದ ಕರಡಿ ಕಡಿದಿದ್ದು, ಸ್ಥಳದಲ್ಲೇ ಮೃತಪಟ್ಟಿದೆ. ಕರಡಿಯ ಶವವನ್ನು ಗಮನಿಸಿದ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಅರಣ್ಯಾಧಿಕಾರಿ ಭರತ್ ತಳವಾರ್ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹೊಸದುರ್ಗ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.