ಬೆಂಗಳೂರು, ಮೇ 31-ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಾರ್ಟಿ ಒತ್ತಾಯಿಸಿದೆ.
ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ಬಾಲರಾಜಗೌಡ ಮಾತನಾಡಿ, ರಾಜ್ಯದ ಕಾಂಗ್ರೆಸ್ ಪಕ್ಷದ ಬೆಳವಣಿಗೆಗೆ ಮತ್ತು ಪ್ರಭಾವ ವಿಸ್ತರಿಸುವಲ್ಲಿ ಗಣನೀಯ ಸೇವೆ ಸಲ್ಲಿಸಿದ್ದಾರೆ. ಇವರನ್ನು ಸಮ್ಮಿಶ್ರ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಮಾಡಲು ಹೈಕಮಾಂಡ್ಮುಂದಾಗಬೇಕೆಂದು ಒತ್ತಾಯಿಸಿದರು.
ಸಮ್ಮಿಶ್ರ ಸರ್ಕಾರ ರಚನೆ ಮಾಡುವುದಕ್ಕೂ ಹಾಗೂ ಶಾಸಕರು ಆಪರೇಷನ್ ಕಮಲಕ್ಕೆ ಬಲಿಯಾಗದಂತೆ ಇವರು ಕಾಪಾಡಿದ್ದಾರೆ. ಇಂತಹ ಪರಿಸ್ಥಿತಿಯಲ್ಲೂ ಸಹ ಇವರು ಪಕ್ಷ ನಿಷ್ಠೆಯನ್ನು ಉಳಿಸಿಕೊಂಡಿದ್ದಾರೆ. ಪಕ್ಷ ಸಂಕಷ್ಟಕ್ಕೆ ಸಿಲುಕಿದಾಗಲೆಲ್ಲ ವಿಪತ್ತಿನಿಂದ ಕಾಪಾಡಿದ್ದಾರೆ. ಆದ್ದರಿಂದ ಇವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದರು.
ಸಮ್ಮಿಶ್ರ ಸರ್ಕಾರ ಉಳಿಯಬೇಕಾದರೆ ಡಿ.ಕೆ.ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು. ಇಲ್ಲವಾದರೆ ಸಮ್ಮಿಶ್ರ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂದು ತಿಳಿಸಿದರು.