
ವಿಜಯಪುರ, ಮೇ 31-ತಡರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ಮಹಿಳೆಯನ್ನು ಹತ್ಯೆಗೈದಿರುವ ಘಟನೆ ಸಿಂದಗಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರೋಷನಬಿ ಕಡಾಕಡಿ(35) ಕೊಲೆಯಾದ ಮಹಿಳೆ.
ಗೋಲಿಬಾರ ಮಡ್ಡಿ ಗ್ರಾಮದ ರೋಷನಬಿ ಮನೆಯಲ್ಲಿ ಮಲಗಿದ್ದಾಗ ರಾತ್ರಿ ಮನೆಗೆ ಏಕಾಏಕಿ ನುಗ್ಗಿದ ದುಷ್ಕರ್ಮಿಗಳು ಆಕೆಯನ್ನು ಹತ್ಯೆಗೈದು ಪರಾರಿಯಾಗಿದ್ದಾರೆ. ಈ ಘಟನೆಯಿಂದ ಗ್ರಾಮದಲ್ಲಿ ಆತಂಕ ಮನೆ ಮಾಡಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಈ ಸಂಬಂಧ ಸ್ಥಳಕ್ಕೆ ಭೇಟಿ ನೀಡಿರುವ ಸಿಂಧಗಿ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.