ನಗರ ಪ್ರದೇಶಗಳಲ್ಲಿ ಪೆÇಲೀಸರು ಕಟ್ಟೆಚ್ಚರ ವಹಿಸಬೇಕು.ರೌಡಿ ಚಟುವಟಿಕೆಗಳನ್ನು ನಿಯಂತ್ರಿಸಬೇಕು. ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

 

ಬೆಂಗಳೂರು,ಮೇ 31- ನಗರ ಪ್ರದೇಶಗಳಲ್ಲಿ ಪೆÇಲೀಸರು ಕಟ್ಟೆಚ್ಚರ ವಹಿಸಬೇಕು.ರೌಡಿ ಚಟುವಟಿಕೆಗಳನ್ನು ನಿಯಂತ್ರಿಸಬೇಕು. ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಹಿರಿಯ ಪೆÇಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗೃಹ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯ ಕಾರ್ಯದರ್ಶಿ ರತ್ನಪ್ರಭಾ, ಪೆÇಲೀಸ್ ಮಹಾನಿರ್ದೇಶಕರಾದ ನೀಲಮಣಿ ಎನ್. ರಾಜು, ಡಿಐಜಿಗಳಾದ ಎ.ಎಂ.ಪ್ರಸಾದ್, ಪಿ.ಕೆ.ಗರ್ಗ್, ಎಂ.ಎನ್.ರೆಡ್ಡಿ, ನಗರ ಪೆÇಲೀಸ್ ಆಯುಕ್ತ ಸುನೀಲ್ ಕುಮಾರ್ ಸೇರಿದಂತೆ ಹಿರಿಯ ಪೆÇಲೀಸ್ ಅಧಿಕಾರಿಗಳೊಂದಿಗೆ ವಿಧಾನಸೌಧದಲ್ಲಿಂದು ಸಭೆ ನಡೆಸಿದ ಮುಖ್ಯಮಂತ್ರಿ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ , ರೌಡಿ ಚಟುವಟಿಕೆಗಳ ನಿಯಂತ್ರಣ ಮಾಡುವಂತೆ ಪೆÇಲೀಸ್ ಅಧಿಕಾರಿಗಳಿಗೆ ಆದೇಶಿಸಿದರು.

ಪೆÇಲೀಸ್ ಇಲಾಖೆಯಲ್ಲಿ ನಾವು ರಾಜಕೀಯ ಹಸ್ತಕ್ಷೇಪ ಮಾಡುವುದಿಲ್ಲ. ನೀವು ರಾಜಕೀಯ ಹಸ್ತಕ್ಷೇಪಕ್ಕೆ ಒಳಗಾಗಬೇಡಿ. ಮತ್ತೆ ನಿಮ್ಮೊಂದಿಗೆ ಸಭೆ ನಡೆಸಿ ಸುದೀರ್ಘ ಸಮಾಲೋಚನೆ ಮಾಡುತ್ತೇನೆ ಎಂದು ಹೇಳಿದ ಅವರು, ದಕ್ಷತೆಯಿಂದ ಕೆಲಸ ನಿರ್ವಹಿಸುವಂತೆ ಸೂಚಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ