ಬೆಂಗಳೂರು, ಮೇ 31- ಡಿಕೆಶಿ ಸಹೋದರರು ಹಾಗೂ ಆಪ್ತರ ವಿರುದ್ಧ ಸಿಬಿಐನಿಂದ ಸರ್ಚ್ ವಾರೆಂಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ಮುಖಂಡರು ನಗರದಲ್ಲಿಂದು ಪ್ರತಿಭಟನೆ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಷಾ ಅವರು ಸಿಬಿಐ, ಇಡಿ, ಐಟಿ ಸಂಸ್ಥೆಗಳನ್ನು ದುರುಪಯೋಗಮಾಡಿಕೊಳ್ಳುತ್ತಿದ್ದಾರೆ ಎಂದು ಕಾರ್ಯಕರ್ತರು ಆರೋಪಿಸಿದರು.
ರಾಜಕೀಯವಾಗಿ ಬಹುಮತ ಪಡೆಯಲು ಸಾಧ್ಯವಾಗದ ಬಿಜೆಪಿ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಪ್ರಮುಖ ಪಾತ್ರ ವಹಿಸಿದ ಡಿ.ಕೆ.ಶಿವಕುಮಾರ್ ಅವರನ್ನು ರಾಜಕೀಯವಾಗಿ ತೇಜೋವಧೆ ಮಾಡಲು ಅವರು ಹಾಗೂ ಅವರ ಸಹೋದರರು, ಆಪ್ತರ ವಿರುದ್ಧ ಸಿಬಿಐ ದಾಳಿ ನಡೆಸಲು ಮುಂದಾಗಿರುವ ಕ್ರಮ ಖಂಡನೀಯ ಎಂದು ಕಾಂಗ್ರೆಸ್ ಮುಖಂಡ ಎಸ್.ಮನೋಹರ್ ತಿಳಿಸಿದರು.
ಚುನಾವಣೆ ಸಂದರ್ಭದಲ್ಲಿ ಐಟಿ ಅಧಿಕಾರಿಗಳು ಕಾಂಗ್ರೆಸ್ ಪಕ್ಷದವರನ್ನೇ ಟಾರ್ಗೆಟ್ ಮಾಡಿ ನಿರಂತರವಾಗಿ ದಾಳಿ ನಡೆಸಿ ಬೆದರಿಕೆ ತಂತ್ರ ಅನುಸರಿಸಿದರು ಎಂದು ಕಾಂಗ್ರೆಸ್ ಮುಖಂಡ ಜಿ.ಜನಾರ್ದನ್ ಹೇಳಿದರು.
ಆನಂದ್, ಹೇಮರಾಜ್, ಶೇಖರ್, ಶಿವಕುಮಾರ್, ಆನಂದ್, ಮುರಳಿ, ರಾಮಕೃಷ್ಣ, ಶಂಕರ್, ಉಮಾಬಾಯಿ, ಮಹೇಶ್ ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.