ಇಂದು ಸಿಇಟಿ ಫಲಿತಾಂಶ; ಮಧ್ಯಾಹ್ನ ವೆಬ್​ಸೈಟ್​ನಲ್ಲಿ ಪ್ರಕಟ

ಬೆಂಗಳೂರು ,ಜೂ .1

ಇಂಜಿನಿಯರ್​ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್​ಗಳಿಗೆ ಪ್ರವೇಶ ಪಡೆಯಲು ಕರ್ನಾಟಕ ಫ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಸಿಇಟಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಲಿದೆ.
ಏ.18ರಂದು ನಡೆದ ಸಿಇಟಿ ಪರೀಕ್ಷೆ ನಡೆದಿದ್ದು, 1,98,639 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು. ಚುನಾವಣೆ ಹಿನ್ನಲೆ ಪರೀಕ್ಷೆ ಫಲಿತಾಂಶ ತಡವಾಗಿದ್ದು, ಇಂದು ಪ್ರಕಟವಾಗಲಿದೆ.
ಮಧ್ಯಾಹ್ನ 1ಗಂಟೆಗೆ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದ್ದು, ಇಲಾಖೆಯ ವೆಬ್​ಸೈಟ್​ನಲ್ಲಿ ಮಧ್ಯಾಹ್ನ ಮೂರು ಗಂಟೆ ಬಳಿಕ ಫಲಿತಾಂಶ ಪಡೆಯಬಹುದು
ಫಲಿತಾಂಶ ನೋಡಲು ಈ ವೆಬ್​ಸೈಟ್​ಗೆ ಭೇಟಿ ನೀಡಬಹುದು
http://kea.kar.nic.in,  http://cet.kar.nic.in ಹಾಗೂ  http://karresults.nic.in

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ