ಉಪಮುಖ್ಯಮಂತ್ರಿ ಹುದ್ದೆ ಅಸಂವಿಧಾನಿಕ; ಹುದ್ದೆಯನ್ನು ರದ್ದು ಮಾಡಬೇಕೆಂದು ಹೈಕೋರ್ಟ್‍ಗೆ ಅರ್ಜಿ ಸಲ್ಲಿಕೆ

 

ಬೆಂಗಳೂರು, ಜೂ.1- ಉಪಮುಖ್ಯಮಂತ್ರಿ ಹುದ್ದೆ ಅಸಂವಿಧಾನಿಕವಾಗಿದ್ದು, ಹುದ್ದೆಯನ್ನು ರದ್ದು ಮಾಡಬೇಕೆಂದು ಕೋರಿ ಹೈಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಸಂವಿಧಾನದಲ್ಲಿ ಉಪಮುಖ್ಯಮಂತ್ರಿ ಎಂಬ ಹುದ್ದೆ ಇಲ್ಲದಿದ್ದರೂ ಉಪಮುಖ್ಯಮಂತ್ರಿ ಎಂದು ಕಾನೂನು ಬಾಹಿರವಾಗಿ ಪ್ರಮಾಣ ವಚನ ತೆಗೆದುಕೊಳ್ಳಲಾಗಿದೆ. ಈ ಹುದ್ದೆಯನ್ನು ರದ್ದು ಮಾಡಬೇಕೆಂದು ಕೋರಿ ಮೈಸೂರಿನ ಚಂದ್ರಶೇಖರ್ ಎಂಬುವವರು ಹೈಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭದಲ್ಲಿ ಉಪಮುಖ್ಯಮಂತ್ರಿಯಾಗಿ ಡಾ.ಜಿ.ಪರಮೇಶ್ವರ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದರು. ಸಂವಿಧಾನದಲ್ಲಿ ಉಪಮುಖ್ಯಮಂತ್ರಿ ಹುದ್ದೆ ಇಲ್ಲ. ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮೇಲೆ ಅವರು ಉಪಮುಖ್ಯಮಂತ್ರಿ ಎಂಬ ಹುದ್ದೆಯನ್ನು ಪಡೆಯಬಹುದು. ಆದರೆ, ಉಪಮುಖ್ಯಮಂತ್ರಿ ಎಂದೇ ಪ್ರಮಾಣ ವಚನ ಸ್ವೀಕರಿಸಿರುವುದು ಕಾನೂನು ಬಾಹಿರವಾಗಿದೆ. ಈ ಹುದ್ದೆಯನ್ನು ರದ್ದುಪಡಿಸಬೇಕೆಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ