ವಿಧಾನಪರಿಷತ್ ಚುನಾವಣೆ: ಬಹುತೇಕ ಎಲ್ಲರೂ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ

 

ಬೆಂಗಳೂರು, ಜೂ.1- ವಿಧಾನಪರಿಷತ್ ಚುನಾವಣೆಗೆ ಸಲ್ಲಿಕೆಯಾಗಿದ್ದ 12 ನಾಮಪತ್ರಗಳಲ್ಲಿ 11 ಕ್ರಮ ಬದ್ಧವಾಗಿದ್ದು, ಬಹುತೇಕ ಎಲ್ಲರೂ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಗಳಿವೆ.
ನಾಮಪತ್ರಗಳ ಪರಿಶೀಲನೆ ಇಂದು ನಡೆದಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಸಂಗಮೇಶ್ ನಾಗಪ್ಪ ಚಿಕ್ಕನರಗುಂದ ಅವರು ಸಲ್ಲಿಸಿದ ನಾಮಪತ್ರ ತಿರಸ್ಕøತವಾಗಿದ್ದು, ಉಳಿದ ಮೂರು ರಾಜಕೀಯ ಪಕ್ಷಗಳ 11 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ. ವಿಧಾನಸಭೆ ಜಂಟಿಕಾರ್ಯದರ್ಶಿ ಹಾಗೂ ವಿಧಾನಪರಿಷತ್‍ನ ಚುನಾವಣಾಧಿಕಾರಿ ಎಂ.ಎಸ್.ಕುಮಾರಸ್ವಾಮಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಬಿಜೆಪಿ ಅಭ್ಯರ್ಥಿಗಳಾದ ಎಸ್.ರುದ್ರೇಗೌಡ, ಡಾ.ತೇಜಸ್ವಿನಿಗೌಡ, ರಘುನಾಥ್‍ರಾವ್ ಮಲ್ಕಾಪುರೆ, ಕೆ.ಪಿ.ನಂಜುಂಡಿ ವಿಶ್ವಕರ್ಮ, ಎನ್.ರವಿಕುಮಾರ್, ಕಾಂಗ್ರೆಸ್ ಅಭ್ಯರ್ಥಿಗಳಾದ ಕೆ.ಗೋವಿಂದರಾಜ್, ಸಿ.ಎಂ.ಇಬ್ರಾಹಿಂ, ಅರವಿಂದಕುಮಾರ್ ಅರಳಿ, ಕೆ.ಹರೀಶ್‍ಕುಮಾರ್ ಹಾಗೂ ಜೆಡಿಎಸ್ ಅಭ್ಯರ್ಥಿಗಳಾದ ಬಿ.ಎಂ.ಫಾರೂಕ್, ಎಸ್.ಎಲ್.ಧರ್ಮೇಗೌಡ ಅವರ ನಾಮಪತ್ರಗಳು ಕ್ರಮಬದ್ಧವಾಗಿವೆ.

ಈ 11 ಮಂದಿ ಅಭ್ಯರ್ಥಿಗಳು ಬಹುತೇಕ ಅವಿರೋಧವಾಗಿ ಆಯ್ಕೆಯಾದಂತಾಗಿದ್ದು, ಸೋಮವಾರ ಅಧಿಕೃತ ಘೋಷಣೆಯಾಗುವ ಸಾಧ್ಯತೆಗಳಿವೆ.
ರಾಜ್ಯ ವಿಧಾನಸಭೆ ಸದಸ್ಯರಿಂದ ವಿಧಾನಪರಿಷತ್‍ನ 11 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಕಡೆಯ ದಿನವಾದ ನಿನ್ನೆ 12 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು.
ನಾಮಪತ್ರ ವಾಪಸ್ ಪಡೆಯಲು ಜೂ.4ರವರೆಗೂ ಕಾಲಾವಕಾಶವಿದ್ದು, ಅಂದು ಸಂಜೆ ವಿಧಾನಪರಿಷತ್‍ಗೆ ಚುನಾಯಿತರಾದ ಸದಸ್ಯರ ಪಟ್ಟಿಯನ್ನು ಅಧಿಕೃತವಾಗಿ ಚುನಾವವಣಾಧಿಕಾರಿ ಪ್ರಕಟಿಸಲಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ