ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ: 10 ಮಂದಿ ದುರ್ಮರಣ

ಮುಂಬೈ,ಜೂ.1

ಮಹಾರಾಷ್ಟ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರು ಮತ್ತು ಟ್ರಕ್‌ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಸಾವಿಗೀಡಾಗಿದ್ದಾರೆ.

ಯವತ್ಮಾಲ್‌ನ ಅರ್ನಿ ಬಳಿ ಇಂದು ಬೆಳಗಿನ ಜಾವ ಈ ದುರಂತ ಜರುಗಿದೆ. ಈ ಘಟನೆಯಲ್ಲಿ 10 ಜನರು ಮೃತಪಟ್ಟರೆ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸದ್ಯ ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ