ದೆಹಲಿ; ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯ ದಾಭಾ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಪ್ರಕರಣವನ್ನು ಎನ್ಹೆಚ್ಆರ್ಸಿ (ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ) ತನಿಖೆ ನಡೆಸುವಂತೆ ಬಿಜೆಪಿ ಶನಿವಾರ ಆಗ್ರಹಿಸಿದೆ.
ರಾಜ್ಯ ಸರ್ಕಾರ ಹಾಗೂ ಪೊಲೀಸರು ಅಪರಾಧ ತನಿಖಾ ವಿಭಾಗದ ಮೇಲೆ ನಮಗೆ ನಂಬಿಕೆಯಿಲ್ಲ. ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವೇ ತನಿಖೆ ನಡೆಸಬೇಕೆಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ ಅವರು ಎನ್ಹೆಚ್ಆರ್ಸಿಗೆ ಪತ್ರ ಬರೆದಿದ್ದಾರೆ.
ಈ ನಡುವೆ ಹೇಳಿಕೆ ನೀಡಿರುವ ಬಿಜೆಪಿ ನಾಯಕ ಹಾಗೂ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಅವರು, ರಾಜ್ಯದಲ್ಲಿರುವ ಪೊಲೀಸರೇ ಹಿಂಸಾಚಾರಕ್ಕೆ ಬೆಂಬಲ ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಮಮತಾ ಬ್ಯಾನರ್ಜಿಯವರ ಆದೇಶದ ಮೇರೆಗೆ ತೃಣಮೂಲ ಕಾಂಗ್ರೆಸ್ ಈ ರೀತಿ ಮಾಡುತ್ತಿದೆ. ಇದೆಲ್ಲಾ ಹೊಸದೇನಲ್ಲ. ಟಿಎಂಸಿ ಹಾಗೂ ಪೊಲೀಸರು ಕೈಜೋಡಿಸಿರುವುದೇ ದೊಡ್ಡ ಸಮಸ್ಯೆಯಾಗಿದೆ. ರಾಜ್ಯದಲ್ಲಿರುವ ಪೊಲೀಸರೇ ಹಿಂಸಾಚಾರಕ್ಕೆ ಬೆಂಬಲ ನೀಡುತ್ತಿದ್ದಾರೆಂದು ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತನ ಮೃತಹೇದ ಹೈ ಟೆನ್ಶನ್ ವಿದ್ಯುತ್ ಕಂಬದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕಳೆದ ಬುಧವಾರ ಕೂಡ ಪುರುಲಿಯಾ ಜಿಲ್ಲೆಯ ಸುಪುರ್ಧಿ ಗ್ರಾಮದಲ್ಲಿ ತ್ರಿಲೋಚನ್ ಮಹತೋ ಎಂಬ ಯುವಕನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈತ ಕೂಡ ಬಿಜೆಪಿ ಕಾರ್ಯಕರ್ತನಾಗಿದ್ದ. ಇತ್ತೀಚೆಗೆ ನಡೆದಿದ್ದ ಸ್ತಳೀಯ ಸಂಸ್ಥೆಗಳ ಚುನಾವಣಾ ಸಂದರ್ಭದಲ್ಲಿ ಉಂಟಾದ ಗಲಭೆ ಹಿನ್ನಲೆಯಲ್ಲಿ ಈತನನ್ನು ಹತ್ಯೆ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದವು.