
ಬೆಂಗಳೂರು, ಜೂ.2-ಕಾವೇರಿ ನದಿ ನೀರು ಪ್ರಾಧಿಕಾರ ರಚನೆ ಮಾಡಿ ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ಸಂಬಂಧಿಸಿದಂತೆ ಕಾನೂನು ತಜ್ಞರ ಸಲಹೆ ಪಡೆದು, ರಾಜ್ಯದ ಹಿತ ಕಾಪಾಡುವ ನಿಟ್ಟಿನಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ವಿಧಾನ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕೇಂದ್ರ ಸರ್ಕಾರ ನಿನ್ನೆ ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರ ರಚಿಸಿದ್ದು ,ಇದರ ಸಾಧಕ-ಬಾಧಕಗಳ ಬಗ್ಗೆ ಕಾನೂನು ತಜ್ಞರು, ಪರಿಣಿತರೊಂದಿಗೆ ಚರ್ಚಿಸಲಾಗುವುದು.
ಪ್ರಾಧಿಕಾರ ರಚನೆಯಿಂದ ರಾಜ್ಯಕ್ಕೆ ಆಗುವ ಅನುಕೂಲ ಹಾಗೂ ಅನಾನುಕೂಲದ ಬಗ್ಗೆ ಸಲಹೆ ಪಡೆದು ರಾಜ್ಯದ ಹಿತ ಕಾಪಾಡುವ ನಿಟ್ಟಿನಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದಾಗಿ ಹೇಳಿದರು.
ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪ್ರಾಧಿಕಾರ ರಚಿಸಿ ಅಧಿಸೂಚನೆ ಹೊರಡಿಸಲು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‍ನಲ್ಲಿ ಕಾಲಾವಕಾಶವನ್ನು ತೆಗೆದುಕೊಂಡಿತು.