ಬೆಂಗಳೂರು, ಜೂ.2- ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಮಾಡಿ ಪರಾರಿಯಾಗಿರುವ ಶಾರ್ಪ್‍ಶೂಟರ್‍ಗಳು ಯಾರು ಎಂಬುದರ ಬಗ್ಗೆ ಇನ್ನೂ ತಿಳಿದುಬಂದಿಲ್ಲ.
ಈ ಪ್ರಕರಣದ ತನಿಖೆ ಕೈಗೊಂಡಿರುವ ಎಸ್‍ಐಟಿ, ಶಾರ್ಪ್‍ಶೂಟರ್‍ಗಳಿಗಾಗಿ ತೀವ್ರ ಶೋಧ ನಡೆಸುತ್ತಿದೆ.
ಗೌರಿಹತ್ಯೆಗೆ ಹಂತಕರು ಎಲ್ಲೆಲ್ಲಿ ಸಂಚು ರೂಪಿಸಿದ್ದರು ಮತ್ತು ಎಲ್ಲಿ ಗುಂಡು ಖರೀದಿಸಿದ್ದರು ಎಂಬುದರ ಬಗ್ಗೆ ಎಸ್‍ಐಟಿ ತನಿಖೆಯಿಂದ ತಿಳಿದುಬಂದಿದೆ.
ಆದರೆ ಗೌರಿಲಂಕೇಶ್ ಅವರನ್ನು ಹತ್ಯೆ ಮಾಡಿ ಪರಾರಿಯಾಗಿರುವ ಶಾರ್ಪ್‍ಶೂಟರ್ ಯಾರೆಂಬುದು ಇದುವರೆಗೂ ತಿಳಿದುಬಂದಿಲ್ಲ.
ಈಗಾಗಲೇ ಅಕ್ರಮ ಶಸ್ತ್ರಾಸ್ತ್ರ ಮಾರಾಟ ಪ್ರಕರಣದಲ್ಲಿ ಬಂಧಿಸಲಾಗಿರುವ ನವೀನ್‍ನನ್ನು ತನಿಖಾ ತಂಡ ಹೆಚ್ಚಿನ ವಿಚಾರಣೆಗೆ ಒಳಪಡಿಸಿ ಕೆಲವು ಮಾಹಿತಿಗಳನ್ನು ಪಡೆದುಕೊಂಡಿದೆ.
ಸಾಹಿತಿ ಕೆ.ಎಸ್.ಭಗವಾನ್ ಹತ್ಯೆಗೆ ಸಂಚುರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರನ್ನು ಬಂಧಿಸಲಾಗಿದೆ.
ಆರೋಪಿಗಳಾದ ಶಿಕಾರಿಪುರದ ಕಪ್ಪನಹಳ್ಳಿ ಗ್ರಾಮದ ಸುಜೀತ್‍ಕುಮಾರ್ ಅಲಿಯಾಸ್ ಪ್ರವೀಣ್ (37), ಮಹಾರಾಷ್ಟ್ರದ ಅಮೋಲ್ ಕಾಳೆ ಅಲಿಯಾಸ್ ಬಾಯ್ ಸಾಬ್,ï ಅಮಿತ್ ದೇಗ್ವೇಕರ್ ಅಲಿಯಾಸ್ ಪ್ರದೀಪ್(38) ಹಾಗೂ ವಿಜಯಪುರ ಜಿಲ್ಲೆ ರತ್ನಾಪುರ ಗ್ರಾಮದ ಮನೋಹರ್ ದುಂಡಪ್ಪ ಯಡವೆ ಅಲಿಯಾಸ್ ಮನೋಜ್ (29) ನನ್ನು ಹೆಚ್ಚಿನ ವಿಚಾರಣೆಗಾಗಿ ಎಸ್‍ಐಟಿ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದೆ.
ಆದರೆ ಗೌರಿಲಂಕೇಶ್ ಅವರನ್ನು ಹತ್ಯೆ ಮಾಡಿ ಪರಾರಿಯಾಗಿರುವ ಶಾರ್ಪ್‍ಶೂಟರ್‍ಗಳು ಯಾರೆಂಬುದು ಈತನಕ ತಿಳಿದುಬಂದಿಲ್ಲ.