
ಅಮೃತ್‌ಸರ: ಪಂಜಾಬ್‌ನ ಅಮೃತ್‌ಸರದಲ್ಲಿ ಕಾಂಗ್ರೆಸ್ ಮುಖಂಡರೊಬ್ಬರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಗುರ್‌ದೀಪ್ ಸಿಂಗ್ ಕೊಲೆಯಾದ ಕಾಂಗ್ರೆಸ್ ಮುಖಂಡ.
ಕಾಂಗ್ರೆಸ್ ಕೌನ್ಸಿಲರ್ ಆಗಿದ್ದ ಗುರ್‌ದೀಪ್ ಸಿಂಗ್ ಇಲ್ಲಿನ ಗೋಲ್‌ಭಾಗ್ ಸ್ಟೇಡಿಯಂನಲ್ಲಿ ಕುಸ್ತಿ ಅಭ್ಯಾಸ ಮಾಡುತ್ತಿದ್ದರು. ಈ ವೇಳೆ ಹಂತಕರು ಗುರ್‌ದೀಪ್ ಮೇಲೆ ಹಲವು ಸುತ್ತಿನ ಗುಂಡಿನ ದಾಳಿ ನಡೆಸಿದ್ದಾರೆ. ಇದರಿಂದ ಗುರ್‌ದೀಪ್ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಗುರ್‌ದೀಪ್ ಸಿಂಗ್‌ಗೆ ಹಿಂದೆಯೇ ಕೊಲೆ ಬೆದರಿಕೆಯೊಂದು ಬಂದಿತ್ತು ಎಂದು ಕಾಂಗ್ರೆಸ್ ಶಾಸಕ ರಾಜ್ ಕುಮಾರ್ ವೆಕ್ರಾ ತಿಳಿಸಿದ್ದಾರೆ. ಸದ್ಯ ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.