
ಬೆಂಗಳೂರು, ಜೂ.3-ಕಳೆದ ಎರಡು ವಾರಗಳಿಂದ ಸಮ್ಮಿಶ್ರ ಸರ್ಕಾರ ರಚನೆ ಸಂಬಂಧ ಒತ್ತಡದಲ್ಲಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ರಿಲ್ಯಾಕ್ಸ್ ಮೂಡ್‍ನಲ್ಲಿದ್ದಾರೆ.
ಇಂದು ಯಾವುದೇ ಅಧಿಕೃತ ಕಾರ್ಯಕ್ರಮಗಳಿಲ್ಲದೆ ಕುಟುಂಬದ ಸದಸ್ಯರ ಜತೆ ವಾರಾಂತ್ಯದ ರಿಲ್ಯಾಕ್ಸ್‍ನಲ್ಲಿದ್ದಾರೆ. ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆ, ಉಭಯ ಪಕ್ಷಗಳ ನಡುವೆ ಖಾತೆ ಹಂಚಿಕೆ ಮೊದಲಾದ ವಿಚಾರಗಳಿಗೆ ಸಂಬಂಧಿಸಿದಂತೆ ಕಾರ್ಯದೊತ್ತಡಕ್ಕೆ ಮುಖ್ಯಮಂತ್ರಿ ಒಳಗಾಗಿದ್ದರು.
ಸಮ್ಮಿಶ್ರ ಸರ್ಕಾರದ ಬಹಳಷ್ಟು ಬಿಕ್ಕಟ್ಟು ಬಗೆಹರಿದ ಹಿನ್ನೆಲೆಯಲ್ಲಿ ಇಂದು ತಮ್ಮ ಕುಟುಂಬದ ಸದಸ್ಯರೊಂದಿಗೆ ಮುಖ್ಯಮಂತ್ರಿ ಕಾಲ ಕಳೆದಿದ್ದಾರೆ.