ಎಚ್.ಎಂ.ರೇವಣ್ಣ ಅವರಿಗೆ ಸಚಿವ ಸ್ಥಾನ ನೀಡುವಂತೆ ರಾಜ್ಯ ಕುರುಬರ ಸಂಘ ಒತ್ತಾಯ

 

ಬೆಂಗಳೂರು, ಜೂ.3- ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಕುರುಬ ಸಮುದಾಯದ ಪ್ರಭಾವಿ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಎಚ್.ಎಂ.ರೇವಣ್ಣ ಅವರಿಗೆ ಸಚಿವ ಸ್ಥಾನ ನೀಡುವಂತೆ ರಾಜ್ಯ ಕುರುಬರ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಒತ್ತಾಯಿಸಿವೆ.
ಎಚ್.ಎಂ.ರೇವಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಸಂಘಟನೆಗಳು ಆಗ್ರಹಿಸಿದ್ದು, ಒಂದು ವೇಳೆ ಸಚಿವ ಸ್ಥಾನ ಕೈ ತಪ್ಪಿದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸಮುದಾಯದ ವಿರೋಧ ಎದುರಿಸಬೇಕಾಗಬಹುದು ಎಂದು ತಿಳಿಸಿವೆ.
ಈ ಸಂಬಂಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರನ್ನು ಕುರುಬ ಸಮುದಾಯದ ಸಂಘಟನೆಗಳ ಮುಖಂಡರು ಭೇಟಿ ಮಾಡಿ ಆಗ್ರಹಿಸಿದ್ದಾರೆ.
ಕುರುಬ ಸಮುದಾಯವನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ರೇವಣ್ಣ ಅವರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಕುರುಬ ಸಂಘಟನೆಗಳು ಒತ್ತಾಯಿಸಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ