ಅನಾರೋಗ್ಯದಿಂದ ಬೇಸತ್ತ ವ್ಯಕ್ತಿಯೊಬ್ಬ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಬೆಳಗಾವಿ, ಜೂ.4- ಅನಾರೋಗ್ಯದಿಂದ ಬೇಸತ್ತ ವ್ಯಕ್ತಿಯೊಬ್ಬ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕ್ಯಾಂಪ್ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ವಿಜಯನಗರ ನಿವಾಸಿ ಶೈಲೇಶ್ ಶರತ್ ಜೋಷಿ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಈತ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದು , ಹಲವು ಬಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡರೂ ಗುಣಮುಖವಾಗದ ಹಿನ್ನೆಲೆಯಲ್ಲಿ ಮನ ನೊಂದು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಸ್ಥಳಕ್ಕೆ ಕ್ಯಾಂಪ್ ಠಾಣೆ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ