
ನವದೆಹಲಿ, ಜೂ.4-ಕೇಂದ್ರ ಪ್ರೌಢ ಶಿಕ್ಷಣ ಪರೀP್ಷÁ ಮಂಡಳಿ(ಸಿಬಿಎಸ್ಇ) ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ನಡೆಸಿದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ಫಲಿತಾಂಶ ಇಂದು ಪ್ರಕಟಗೊಂಡಿದೆ. ಅಧಿಕೃತ ವೆಬ್ಸೈಟ್ಗಳಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.
ದೇಶಾದ್ಯಂತ ಒಟ್ಟು 13,26,725 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಎಂಬಿಬಿಎಸ್ ಮತ್ತು ಬಿಡಿಎಸ್ ಕೋಸ್ಗಳ ಪ್ರವೇಶಕ್ಕಾಗಿ ಈ ಪರೀಕ್ಷೆ ನಡೆಸಲಾಗಿತ್ತು.