ವಿಧಾನಪರಿಷತ್ ಚುನಾವಣೆ ತಯಾರಿ ಹಿನ್ನಲೆ: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮಹತ್ವದ ಸಭೆ

 

ಬೆಂಗಳೂರು, ಜೂ.4- ವಿಧಾನಪರಿಷತ್ ಚುನಾವಣೆ ತಯಾರಿಯ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಇಂದು ಪಕ್ಷದ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಿದರು.

ಬೆಂಗಳೂರು ನಗರ, ಗ್ರಾಮಾಂತರ ಹಾಗೂ ರಾಮನಗರ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಶಾಸಕರು, ಅಭ್ಯರ್ಥಿಗಳು, ಕೆಪಿಸಿಸಿ ಉಸ್ತುವಾರಿ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು, ಬಿಬಿಎಂಪಿ ಸದಸ್ಯರು ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸಭೆಯಲ್ಲಿ ಭಾಗವಹಿಸಿದ್ದರು.
ಬೆಂಗಳೂರು ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲೇ ಬೇಕಿದೆ. ಈ ನಿಟ್ಟಿನಲ್ಲಿ ಕಾರ್ಯಕರ್ತರೆಲ್ಲಾ ಒಟ್ಟಾಗಿ ಕೆಲಸ ಮಾಡುವಂತೆ ಅವರು ಮನವಿ ಮಾಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ