
ಕೋಲಾರ, ಜೂ.4- ಶಾಲಾ ಬಸ್ ಮತ್ತು ಜೆಲ್ಲಿ ತುಂಬಿದ ಟಿಪ್ಪರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಆರು ಮಕ್ಕಳು ಗಾಯಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇಂದು ಬೆಳಗ್ಗೆ ಭಗವಾನ್ಬುದ್ದ ಶಾಲೆಯ ಬಸ್ ಮಕ್ಕಳನ್ನು ಶಾಲೆಗೆ ಕರೆದೊಯ್ಯುವಾಗ ಪಾತನೆಲವಂಕಿ ಬಳಿ ಬಸ್ ಮತ್ತು ಟಿಪ್ಪರ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಆರು ಮಕ್ಕಳು ಗಾಯಗೊಂಡಿದ್ದು, ಗಾಯಾಳುಗಳನ್ನು ಶ್ರೀನಿವಾಸಪುರ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಈ ಬಗ್ಗೆ ಗೌನಪಲ್ಲಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.