ಎಸ್.ಆರ್.ಪಾಟೀಲ್ ಅವರೊಂದಿಗೆ ಮಾತುಕತೆ ನಡೆಸುವುದಾಗಿ ಉಪಮುಖ್ಯಮಂತ್ರಿ ಹೇಳಿಕೆ

 

ಬೆಂಗಳೂರು, ಜೂ.4- ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಸ್.ಆರ್.ಪಾಟೀಲ್ ಅವರೊಂದಿಗೆ ಮಾತುಕತೆ ನಡೆಸುವುದಾಗಿ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್.ಆರ್.ಪಾಟೀಲ್ ಅವರು ಯಾವ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬುದು ಗೊತ್ತಿಲ್ಲ. ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಮೇಲೆ ವಿಜಯಾನಂದ ಕಾಶ್ಯಂಪೂರ್ ಬೆಂಲಿಗರು ಸೇರಿದಂತೆ ಹಲವರು ಅವರ ನಿವಾಸದ ಎದುರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಅವರು ರಾಜೀನಾಮೆ ನೀಡರಬಹುದು. ನಾನು ಅವರೊಂದಿಗೆ ಮಾತನಾಡುತ್ತೇನೆ ಎಂದು ಹೇಳಿದರು.

ರಾಹುಲ್‍ಗಾಂಧಿ ಅವರು ವಿದೇಶಕ್ಕೆ ತೆರಳಿದ್ದು, ಅವರು ಬಂದ ಮೇಲೆ ದೆಹಲಿಗೆ ತೆರಳುತ್ತೇವೆ ಎಂದು ತಿಳಿಸಿದರು.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಯಾವುದೇ ಅಸಮಾಧಾನವಿಲ್ಲ. ಸಚಿವ ಸಂಪುಟ ವಿಸ್ತರಣೆ, ಉಸ್ತುವಾರಿ ಸಚಿವರ ನೇಮಕದ ವಿಷಯದಲ್ಲೂ ಕೂಡ ಯಾವುದೇ ಅಸಮಾಧಾನ ಇಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ನಿಗದಿಯಂತೆ ಬುಧವಾರ ನೂತನ ಸಚಿವರ ಪ್ರಮಾಣವಚನ ನಡೆಯಲಿದೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ