
ಶ್ರೀನಗರ, ಜೂ. 4-ಕಾಶ್ಮೀರ ಕಣಿವೆಯಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದೆ. ಶೋಪಿಯಾನ್ ಜಿಲ್ಲೆಯ ಜನ ದಟ್ಟಣೆ ಮಾರುಕಟ್ಟೆ ಪ್ರದೇಶದಲ್ಲಿ ಭಯೋತ್ಪಾದಕರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಪೆÇಲೀಸರೂ ಸೇರಿದಂತೆ 18 ಮಂದಿ ತೀವ್ರ ಗಾಯಗೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಪಟ್ಟಣದಲ್ಲಿ ಭದ್ರತಾ ಪಡೆಗಳ ಮೇಲೆ ಉಗ್ರರು ಗ್ರೆನೇಡ್ ಎಸೆದರು. ಈ ಘಟನೆಯಲ್ಲಿ ನಾಲ್ವರು ಪೆÇಲೀಸರು ಹಾಗೂ 14 ನಾಗರಿಕು ಗಾಯಗೊಂಡರು ಎಂದು ಪೆÇಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ದಾಳಿ ನಂತರ ಪರಾರಿಯಾಗಿರುವ ಭಯೋತ್ಪಾದಕರಿಗಾಗಿ ತೀವ್ರ ಶೋಧ ಮುಂದುವರಿದಿದೆ.