ರಸ್ತೆ ಡಿವೈಡರ್‍ಗೆ ಕಾರು ಡಿಕ್ಕಿ

ಮಂಡ್ಯ,ಜೂ.4- ರಸ್ತೆ ಡಿವೈಡರ್‍ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.
ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಬೆಂಗಳೂರು-ಮೈಸೂರು ಹೆದ್ದಾರಿಯ ಬಾಬುರಾಯನಕೊಪ್ಪಲು ಬಳಿಯ ಲೋಲಪಾಲನೆ ಸೇತುವೆ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‍ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಪೆÇಲೀಸರು ಪ್ರಕರಣ ದಾಖಲಿಸಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ