ಕ್ರೈನ್ ಸಾಗಿಸುತ್ತಿದ್ದ ಲಾರಿಗೆ ಕಾರು ಡಿಕ್ಕಿ

ಚಿತ್ರದುರ್ಗ, ಜೂ.4-ಕ್ರೈನ್ ಸಾಗಿಸುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ತಾಯಿ-ಮಗಳು ಸ್ಥಳದಲ್ಲೇ ಸಾವನ್ನಪ್ಪಿ ಅಳಿಯ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೊಳಲ್ಕೆರೆ ತಾಲ್ಲೂಕಿನ ಬೊಮ್ಮನಕಟ್ಟೆ ಗ್ರಾಮದ ಬಳಿ ನಡೆದಿದೆ. ಸರೋಜಮ್ಮ(70), ಸುನಂದಮ್ಮ(40) ಸಾವನ್ನಪ್ಪಿದ ತಾಯಿ-ಮಗಳು.
ಸಂಬಂಧಿಕರ ಅಂತ್ಯ ಸಂಸ್ಕಾರಕ್ಕೆಂದು ಮಡಿಕೇರಿಯಿಂದ ಅರಳಿಕಟ್ಟೆ ಸ್ವಗ್ರಾಮಕ್ಕೆ ಮೂವರು ಕಾರಿನಲ್ಲಿ ಬರುತ್ತಿದ್ದಾಗ ಎದುರಿನಿಂದ ಬಂದ ಕ್ರೈನ್ ಸಾಗಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ತಾಯಿ-ಮಗಳು ಸ್ಥಳದಲ್ಲೇ ಸಾವನ್ನಪ್ಪಿದರೆ ಅಳಿಯ ಸುರೇಶ್‍ಗೆ ಗಂಭೀರ ಗಾಯಗಳಾಗಿದ್ದು , ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಸಂಬಂಧ ಹೊಳಲ್ಕೆರೆ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ