ತಲೆ ಮೇಲೆ ಗುಂಡುಕಲ್ಲು ಎತ್ತಿಹಾಕಿ ಕೂಲಿ ಕಾರ್ಮಿಕನ ಹತ್ಯೆ

ಮಂಡ್ಯ, ಜೂ.4- ತಲೆ ಮೇಲೆ ಗುಂಡುಕಲ್ಲು ಎತ್ತಿಹಾಕಿ ಕೂಲಿ ಕಾರ್ಮಿಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹುಲಿವಾನ ಗ್ರಾಮದಲ್ಲಿ ನಡೆದಿದೆ. ಕರ್ಣ(40) ಕೊಲೆಯಾದ ದುರ್ದೈವಿ. ಕಳೆದ ರಾತ್ರಿ ಆತ ಮನೆಯಲ್ಲಿ ಒಬ್ಬನೇ ಇರುವುದನ್ನು ಗಮನಿಸಿದ ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ.
ಕೂಲಿ ಕೆಲಸ ಮಾಡಿ ಜೀವನ ನಿರ್ವಹಿಸುತ್ತಿದ್ದ ಕರ್ಣ ನಿನ್ನೆ ರಾತ್ರಿ ಮನೆಯಲ್ಲಿ ಮಲಗಿದ್ದಾಗ ಈ ಘಟನೆ ನಡೆದಿದೆ. ಕೆರಗೋಡು ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೆÇಲೀಸರು ಬಲೆ ಬೀಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ