ಮಡಿಕೇರಿ, ಜೂ.4- ಕದ್ದ ಬಂದೂಕನ್ನು ಮಾರಲು ಯತ್ನಿಸುತ್ತಿದ್ದ ಇಬ್ಬರನ್ನು ಪೆÇಲೀಸರು ಬಂಧಿಸಿ ಬಂದೂಕು, ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಅಶೋಕ್ ಹಾಗೂ ನಾಣಯ್ಯ ಬಂಧಿತರು.
ಮಡಿಕೇರಿಯ ಗ್ರಾಮವೊಮದರ ಬಳಿ ಈ ಇಬ್ಬರು ಬಂದೂಕನ್ನು ಮಾರಲು ಯತ್ನಿಸುತ್ತಿದ್ದಾಗ ಗಸ್ತಿನಲ್ಲಿದ್ದ ಪೆÇಲೀಸರನ್ನು ಕಂಡು ತಪ್ಪಿಸಿಕೊಳ್ಳಲು ಯತ್ನಿಸಿದ್ದಾಗ ಅನುಮಾನಗೊಂಡ ಪೆÇಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾಗ ಕದ್ದ ಬಂದೂಕನ್ನು ಮಾರಲು ತಂದಿರುವುದಾಗಿ ಒಪ್ಪಿಕೊಂಡಿದ್ದಾರೆ.
ಆರೋಪಿಗಳನ್ನು ಠಾಣೆಗೆ ಕರೆದೊಯ್ದು ಕದ್ದ ಬಂದೂಕಿನ ಬಗ್ಗೆ ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ. ಈ ಬಂದೂಕನ್ನು ಯಾರಿಂದ, ಯಾವ ಸ್ಥಳದಲ್ಲಿ ಕಳ್ಳತನ ಮಾಡಿದ್ದಾರೆಂಬ ಬಗ್ಗೆ ಪೆÇಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಮಡಿಕೇರಿ ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.