
ಲಕ್ನೋ, ಜೂ.5-ಉತ್ತರ ಪ್ರದೇಶದಲ್ಲಿ ಕನೌಜ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಕೂಲಿ ಕಾರ್ಮಿಕರು ಮೃತಪಟ್ಟು, ಇತರ ಏಳು ಮಂದಿ ತೀವ್ರ ಗಾಯಗೊಂಡಿದ್ದಾರೆ.
ಕನೌಜ್ ಜಿಲ್ಲೆಯ ಜಪೆರ್ ಗ್ರಾಮದ ಬಳಿ ನಿನ್ನೆ ರಾತ್ರಿ 11 ಗಂಟೆಯಲ್ಲಿ ಟಿಪ್ಪರ್ ಮತ್ತು ಟ್ರ್ಯಾಕ್ಟರ್ ನಡುವೆ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿತು. ಈ ದುರಂತದಲ್ಲಿ ಟ್ರ್ಯಾಕ್ಟರ್‍ನಲ್ಲಿದ್ದ ಏಳು ಕೂಲಿ ಕಾರ್ಮಿಕರು ಮೃತಪಟ್ಟರು. ಗಾಯಗೊಂಡ ಇತರ ಏಳು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಹಿರಿಯ ಪೆÇಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸ್ಥಳೀಯ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.