ಸಚಿವ ಭಾಗ್ಯ ಪಡೆದ ಜಾರ್ಜ್ ಧನ್ಯವಾದ

 

ಬೆಂಗಳೂರು, ಜೂ.6- ಕಾಂಗ್ರೆಸ್ ಪಕ್ಷದ ಹೈಕಮಾಂಡ್ ತಮಗೆ ಮತ್ತೆ ಸಚಿವರಾಗಲು ಅವಕಾಶ ಕಲ್ಪಿಸಿಕೊಟ್ಟಿದ್ದು, ಅದಕ್ಕಾಗಿ ಅವರಿಗೆ ಧನ್ಯವಾದ ಹೇಳುತ್ತೇನೆ ಎಂದು ಸಚಿವ ಕೆ.ಜೆ.ಜಾರ್ಜ್ ಇಂದಿಲ್ಲಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ತಮಗೆ ಕೊಟ್ಟಿರುವ ಜವಾಬ್ದಾರಿಯನ್ನು ನಿಭಾಯಿಸುತ್ತೇನೆ. ಯಾವುದೇ ಖಾತೆ ಕೊಟ್ಟರೂ ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎಂದು ಹೇಳಿದರು.

ಇದೇ ವೇಳೆ ಸಚಿವ ಜಮೀರ್ ಅಹಮದ್‍ಖಾನ್ ಮಾತನಾಡಿ, ಕಾಂಗ್ರೆಸ್ ಪಕ್ಷ ನನ್ನನ್ನು ಗುರುತಿಸಿ ಸಚಿವನನ್ನಾಗಿ ಮಾಡಿದೆ.ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
2016ರಲ್ಲೂ ನಾನು ಸಚಿವನಾಗಿದ್ದೆ.ಇದೀಗ ಮತ್ತೆ ಸಚಿವ ಸ್ಥಾನದ ಹುದ್ದೆ ಸಿಕ್ಕಿರುವುದು ಸಂತಸವಾಗಿದೆ.ಯಾವುದೇ ಖಾತೆ ಕೊಟ್ಟರೂ ಜವಾಬ್ದಾರಿಯುತವಾಗಿ ಕೆಲಸ ನಿರ್ವಹಿಸುತ್ತೇನೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ