
ಬೆಂಗಳೂರು, ಜೂ.7- ಇದೇ 11ರಂದು ನಡೆಯಲಿರುವ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಮುಕ್ತವಾಗಿ ಮತ ಚಲಾಯಿಸುವಂತೆ ಮತದಾರರಲ್ಲಿ ಜಾಗೃತಿ ಮೂಡಿಸಲು ಇಂದು ಕ್ಯಾಂಡಲ್ ಲೈಟ್ ಮೆರವಣಿಗೆ ನಡೆಸಲು ಚುನಾವಣಾಧಿಕಾರಿಗಳು ತೀರ್ಮಾನಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಬಿ.ಎನ್.ವಿಜಯ್‍ಕುಮಾರ್ ಅವರ ನಿಧನದಿಂದ ಮುಂದೂಡಲಾಗಿದ್ದ ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಇದೇ 11ರಂದು ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ.
ಮತದಾರರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಇಂದು ಸಂಜೆ ಜಿಲ್ಲಾ ಚುನಾವಣಾಧಿಕಾರಿ ಮಹೇಶ್ವರರಾವ್, ನಗರ ಪೆÇಲೀಸ್ ಆಯುಕ್ತ ಸುನಿಲ್‍ಕುಮಾರ್ ಮತ್ತಿತರ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಕ್ಯಾಂಡಲ್‍ಲೈಟ್ ಮೆರವಣಿಗೆ ನಡೆಸಲಾಗುವುದು.
ಸಂಜೆ 6 ಗಂಟೆಗೆ ಜಯನಗರ ಶಾಪಿಂಗ್ ಕಾಂಪ್ಲೆಕ್ಸ್ ಮುಂಭಾಗದಿಂದ ಆರಂಭವಾಗಲಿರುವ ಮೆರವಣಿಗೆ ವಿವಿಧ ಪ್ರದೇಶಗಳಲ್ಲಿ ಸಂಚರಿಸಿ ಎನ್‍ಎಂಕೆಆರ್‍ವಿ ಕಾಲೇಜು ಸಮೀಪ ಮುಕ್ತಾಯಗೊಳ್ಳಲಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.