ಪರಿಸರ ಸಂರಕ್ಷಣೆ ಪ್ರಾಮಾಣಿಕ ಪ್ರಯತ್ನ ನಡೆಸಬೇಕು: ಸಾರಿಗೆ ಇಲಾಖೆ ಆಯುಕ್ತ ನವೀನ್ ರಾಜ್‍ಸಿಂಗ್ ಕರೆ

Varta Mitra News

 

ಬೆಂಗಳೂರು, ಜೂ.7- ಪರಿಸರ ಸಂರಕ್ಷಣೆ ಪ್ರಾಮಾಣಿಕ ಪ್ರಯತ್ನ ನಡೆಸಬೇಕು. ಸಮೂಹ ಸಾರಿಗೆ ವ್ಯವಸ್ಥೆ, ವಿದ್ಯುತ್ ಚಾಲಿತ ವಾಹನಗಳು, ಬೈಸಿಕಲ್ ಬಳಸುವುದನ್ನು ರೂಢಿಸಿಕೊಳ್ಳಬೇಕು ಎಂದು ಸಾರಿಗೆ ಇಲಾಖೆ ಆಯುಕ್ತ ನವೀನ್ ರಾಜ್‍ಸಿಂಗ್ ಅವರು ಸಿಬ್ಬಂದಿಗಳಿಗೆ ಕರೆ ನೀಡಿದರು.
ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಕಿರು ಹೊತ್ತಿಗೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಮನೆ , ಕಚೇರಿ, ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಬಗ್ಗೆ ಎಲ್ಲರೂ ಆದ್ಯತೆ ನೀಡಬೇಕು. ಪರಿಸರದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಜಾಗರೂಕರಾಗಿ ಬೇರೆಯವರಿಗೂ ತಿಳಿ ಹೇಳಬೇಕು. ವಾಹನ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ ಶಬ್ದಮಾಲಿನ್ಯ, ವಾಯು ಮಾಲಿನ್ಯ ತಡೆಗೆ ಪ್ರಾಮಾಣಿಕ ಕೆಲಸಗಳು ನಡೆಯಬೇಕು ಎಂದು ಕಿವಿಮಾತು ಹೇಳಿದರು.

ಪ್ರತಿಯೊಬ್ಬರು ಒಂದು ಸಸಿಯನ್ನಾದರೂ ನೆಟ್ಟು ಅದನ್ನು ಪೆÇೀಷಿಸಿ ಬೆಳೆಸಬೇಕು. ಉತ್ತಮ ಗಾಳಿ, ನೆರಳು ನೀಡುವಂತೆ ಅದನ್ನು ಮರವಾಗಿ ಬೆಳೆಸಬೇಕು ಎಂದು ಹೇಳಿದರು.
ಜಂಟಿ ಸಾರಿಗೆ ಆಯುಕ್ತ ಜ್ಞಾನೇಂದ್ರ ಕುಮಾರ್ ಮಾತನಾಡಿ, ಕಲಬೆರಕೆ ಇಂಧನ ಬಳಕೆಯಿಂದ ಪರಿಸರಕ್ಕೆ ಸಾಕಷ್ಟು ಹಾನಿಯಾಗುತ್ತಿದೆ. ಇದು ಮಾನವ ಸಂಕುಲದ ಆರೋಗ್ಯದ ಮೇಲೂ ಗಂಭೀರ ಸ್ವರೂಪದ ಪರಿಣಾಮ ಬೀರುತ್ತಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಪರಿಣಾಮಕಾರಿ ಕಾರ್ಯಗಳು ನಡೆಯಬೇಕು ಎಂದು ಹೇಳಿದರು.
ಸಮಾರಂಭದಲ್ಲಿ ಇಲಾಖೆಯ ಪರಿಸರ ಮತ್ತು ಇ ಆಡಳಿತ ವಿಭಾಗದ ಜಂಟಿ ಆಯುಕ್ತರಾದ ಎಂ.ಪಿ.ಓಂಕಾರೇಶ್ವರಿ, ಅಪರ ಸಾರಿಗೆ ಆಯುಕ್ತ ಸಿ.ಪಿ.ನಾರಾಯಣಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ