ನಟ ಅನುಪಮ್ ಖೇರ್ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ

ಮುಂಬೈ, ಜೂ.7-ಬಾಲಿವುಡ್ ಖ್ಯಾತ ಹಿರಿಯ ನಟ ಅನುಪಮ್ ಖೇರ್ ಅಂತಾರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ(ಐಐಎಫ್‍ಎ)ಯ ಪ್ರತಿಷ್ಠಿತ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಥೈಲೆಂಡ್ ರಾಜಧಾನಿ ಬ್ಯಾಂಕಾಕ್‍ನಲ್ಲಿ ನಡೆಯಲಿರುವ ಐಐಎಫ್‍ಎ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಖೇರ್ ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು.
63 ವರ್ಷ ಹಿರಿಯ ಅಭಿನೇತ ಕಳೆದ ಮೂರು ದಶಕಗಳಿಂದ 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ಧಾರೆ. ಚಿತ್ರರಂಗಕ್ಕೆ ಅವರು ನೀಡಿರುವ ¾¾ಅನುಪಮ¿¿ ಕೊಡುಗೆ ಪರಿಗಣಿಸಿ ಅನುಪಮ್ ಖೇರ್ ಅವರಿಗೆ ಈ ಪುರಸ್ಕಾರ ಲಭಿಸಲಿದೆ. ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಅಪಾರ ಸಂತಸ ವ್ಯಕ್ತಪಡಿಸಿರುವ ಅವರು, ತಮ್ಮ 24 ವರ್ಷಗಳ ಸಿನಿಮಾ ಬದುಕಿನ ನನ್ನ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡುತ್ತಿರುವುದು ನನ್ನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಹೇಳಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ