ಬೆಂಗಳೂರು, ಜೂ.7- ಸೂಪರ್ ಸ್ಟಾರ್ ರಜನೀಕಾಂತ್ ಅಭಿನಯದ ಕಾಲಾ ಚಲನಚಿತ್ರ ಬಿಡುಗಡೆಗೆ ವಿರೋಧ ವ್ಯಕ್ತಪಡಿಸಿ , ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಗಿ ಪೆÇಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೆÇಲೀಸ್ ಮಹಾ ನಿರ್ದೇಶಕರಾದ ಕಮಲ್ ಪಂಥ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಚಿತ್ರಮಂದಿರಗಳ ಮುಂದೆ ಬಿಗಿ ಪೆÇಲೀಸ್ ಬಂದೋಬಸ್ತ್ ಮಾಡಲಾಗಿದೆ. ಎಲ್ಲಿಯೂ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ಹೇಳಿದರು.