ತಿಯಾದ ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ – ಶ್ರೀ ರವಿಶಂಕರ್ ಗುರೂಜಿ

ನವದೆಹಲಿ, ಜೂ.7- ಅತಿಯಾದ ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದು, ಎಲ್ಲರೂ ಪ್ಲಾಸ್ಟಿಕ್ ಬಳಕೆ ಮಾಡುವುದನ್ನು ನಿಲ್ಲಿಸಲು ಸಂಕಲ್ಪ ಮಾಡಬೇಕು ಎಂದು ಆರ್ಟ್ ಆಫ್ ಲಿವಿಂಗ್‍ನ ಶ್ರೀ ರವಿಶಂಕರ್ ಗುರೂಜಿ ಕರೆ ನೀಡಿದ್ದಾರೆ.
ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ಸಿನಲ್ಲಿ ಅರಿವು ಮೂಡಿದರೆ ಎಲ್ಲರೂ ಸಹ ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸಬಹುದಾಗಿದೆ. ಕಂಡಕಂಡಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಬಿಸಾಡದಂತೆ ಜಾಗೃತಿ ಮೂಡಿಸಲಾಗಿದೆ. ಮರುಬಳಕೆಯಾಗುವಂತಹ ಚೀಲಗಳು, ಬಾಟಲಿಗಳನ್ನು ಬಳಸಬೇಕೆಂದು ಸಲಹೆ ನೀಡಿದರು. ರೈತರು ಬೆಳೆಯ ನಂತರ ತ್ಯಾಜ್ಯವನ್ನು ಸುಡುವ ಬದಲು ಅದನ್ನು ಸಾವಯವ ರೀತಿಯಲ್ಲಿ ಮರುಬಳಕೆ ಮಾಡಿದರೆ ಪ್ರಕೃತಿ ಮಾಲಿನ್ಯವೂ ತಪ್ಪುತ್ತದೆ ಎಂದರು. ಇದೇ ಸಂದರ್ಭದಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯು ಡಿಜಿ ಹೋಂಗಾರ್ಡ್ ಅವರೊಂದಿಗೆ ಒಪ್ಪಂದ ಮಾಡಿಕೊಂಡು ಸಾವಿರ ಪರಿಸರ ಮಾರ್ಷಲ್‍ಗಳಿಗೆ ತರಬೇತಿ ನೀಡಿ ದೆಹಲಿಯ ಕೊಳಚೆ ಪ್ರದೇಶಗಳಲ್ಲಿ ಜಾಗೃತಿ ಮೂಡಿಸುವ ಬಗ್ಗೆ ಅವರಿಗೆ ತರಬೇತಿ ನೀಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಯುನೈಟೆಡ್ ನೇಷನ್ ಎನ್ವಿರಾನ್ಮೆಂಟ್ ಕಾರ್ಯಕಾರಿ ನಿರ್ದೇಶಕ ಎರಿಕ್ಸೋಲ್ಜೀಮ್, ಕೇಂದ್ರ ಸಚಿವ ಹರ್ಷವರ್ಧನ್ ಮತ್ತಿತರರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ