ಬೆಂಗಳೂರು, ಜೂ.7- ಬೆಂಗಳೂರು ಪದವೀಧರರ ಕ್ಷೇತ್ರ, ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ರಾಜ್ಯ ವಿಧಾನಪರಿಷತ್‍ಗೆ ನಾಳೆ ದ್ವೈವಾರ್ಷಿಕ ಚುನಾವಣೆ ನಡೆಯುತ್ತಿದ್ದು, ಮತ ಕ್ಷೇತ್ರಗಳ ವ್ಯಾಪ್ತಿಯ ಮತದಾರರು ಮತದಾನ ಮಾಡಲು ಅನುಕೂಲವಾಗುವಂತೆ ಸಾಂದರ್ಭಿಕ ರಜೆ ಘೋಷಿಸಲಾಗಿದೆ.
ಸರ್ಕಾರಿ, ಖಾಸಗಿ ಶಾಲಾ, ಕಾಲೇಜುಗಳು, ಅನುದಾನ ರಹಿತ ವಿದ್ಯಾಸಂಸ್ಥೆಗಳೂ ಸೇರಿದಂತೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಬ್ಯಾಂಕುಗಳು, ಇತರೆ ಬ್ಯಾಂಕುಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಾರ್ಖಾನೆಗಳು, ಕೈಗಾರಿಕಾ ಸಂಸ್ಥೆ, ಸಹಕಾರಿ ರಂಗದ ಸಂಘ-ಸಂಸ್ಥೆಗಳಲ್ಲಿ ಪದವೀಧರರು ಮತ್ತು ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅರ್ಹ ಮತದಾರರಿಗೆ ಸೀಮಿತವಾದಂತೆ ಎಲ್ಲ ಔದ್ಯಮಿಕ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿಯಾಗಿ ಕೆಲಸ ಮಾಡುವ ಎಲ್ಲ ಅರ್ಹ ಮತದಾರರಿಗೆ ಸೀಮಿತವಾಗುವಂತೆ ಮತದಾನ ಮಾಡಲು ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಆದೇಶ ಹೊರಡಿಸಿದ್ದಾರೆ.