ರಾಮಲಿಂಗಾರೆಡ್ಡಿ ಅವರಿಗೆ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕೆಂದು ರೆಡ್ಡಿ ಸಮುದಾಯ ಆಗ್ರಹ

 

ಬೆಂಗಳೂರು,ಜೂ.7- ಮಾಜಿ ಸಚಿವ ಹಾಗೂ ಹಾಲಿ ಶಾಸಕ ರಾಮಲಿಂಗಾರೆಡ್ಡಿ ಅವರಿಗೆ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕೆಂದು ರೆಡ್ಡಿ ಸಮುದಾಯ ಆಗ್ರಹಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಪ್ರಧಾನ ಕಾರ್ಯದರ್ಶಿ ಮುನಿಗಾಪ್ಪ , ಕಳೆದ 45 ವರ್ಷಗಳಿಂದ ರಾಮಲಿಂಗರೆಡ್ಡಿ ಕಾಂಗ್ರೆಸ್‍ಗೆ ನಿಷ್ಠಾವಂತ ಕಾರ್ಯಕರ್ತರಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದು , 7 ಬಾರಿ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ್ದಾರೆ. ರೆಡ್ಡಿ ಸಮುದಾಯದ ಅಚ್ಚುಮೆಚ್ಚಿನ ನಾಯಕರಾಗಿದ್ದಾರೆ. ಕಾರಣ ಕಾಂಗ್ರೆಸ್ ಪಕ್ಷ ರಾಮಲಿಂಗಾರೆಡ್ಡಿ ಅವರ ಸೇವೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು.

ರಾಜ್ಯದಲ್ಲಿ ಒಟ್ಟು 50 ಲಕ್ಷ ರೆಡ್ಡಿ ಸಮುದಾಯದ ಜನಸಂಖ್ಯೆ ಇದೆ. 21 ಜಿಲ್ಲೆಗಳಲ್ಲಿ ನಮ್ಮ ಸಮುದಾಯದ ಜನ ವಾಸಿಸುತ್ತಿದ್ದಾರೆ. ಸಚಿವರಾಗಿ, ಶಾಸಕರಾಗಿ, ರಾಮಲಿಂಗಾರೆಡ್ಡಿ ಅವರು ಉತ್ತಮ ಸೇವೆ ಸಲ್ಲಿಸಿದ್ದಾರೆ. ಆದ್ದರಿಂದ ಕಾಂಗ್ರೆಸ್ ಹೈಕಮಾಂಡ್ ಗಂಭೀರವಾಗಿ ಪರಿಗಣಿಸಬೇಕು ಎಂದರು.
ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ರೆಡ್ಡಿ ಸಮುದಾಯ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲು ನಿರ್ಧರಿಸಿದೆ ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ