
ತ್ರಿವೇಣಿ 24ಕ್ರಾಫ್ಟ್ ಲಾಂಛನದಲ್ಲಿ ವೆಂಕಟೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ ಎಂಎಲ್ಎ ಚಿತ್ರದ ಪ್ರಥಮಪ್ರತಿ ಸಿದ್ದವಾಗಿದ್ದು, ಸದ್ಯದಲ್ಲೇ ಸೆನ್ಸಾರ್ ಮಂಡಳಿ ಚಿತ್ರವನ್ನು ವೀಕ್ಷಿಸಲಿದೆ. ಶೀಘ್ರದಲ್ಲೇ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲ್ಲೇ ಪಿ.ಆರ್.ಕೆ ಆಡಿಯೋ ಮೂಲಕ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು ಕೇಳುಗರ ಮನ ಗೆದ್ದಿದೆ. ವೆಂಕಿ ಪೆಲುಗುಳ ಈ ಚಿತ್ರದ ಸಹ ನಿರ್ಮಾಪಕರು.
ಮೌರ್ಯ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರದ ನಾಯಕರಾಗಿ ಪ್ರಥಮ್ ಅಭಿನಯಿಸಿದ್ದಾರೆ. ಸೋನಾಲ್ ಮಾಂಟೆರೊ ಈ ಚಿತ್ರದ ನಾಯಕಿ. ಸ್ಪರ್ಷ ರೇಖಾ, ಕುರಿ ಪ್ರತಾಪ್, ರಾಜಶೇಖರ್, ನವೀನ್, ಚಂದ್ರಕಲಾ ಮೋಹನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಮಾಜಿ ಸಚಿವ ಎಚ್.ಎಂ.ರೇವಣ್ಣ ವಿಶೇಷಪಾತ್ರದಲ್ಲಿ ಅಭಿನಯಿಸಿದ್ದಾರೆ.
ವಿಕ್ರಂಸುಬ್ರಮಣ್ಯ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಕೃಷ್ಣಸಾರಥಿ ಅವರ ಛಾಯಾಗ್ರಹಣವಿದೆ. ಕೆ.ಆರ್.ಲಿಂಗರಾಜು ಸಂಕಲನ, ಕಲೈ ನೃತ್ಯ ನಿರ್ದೇಶನ ಹಾಗೂ ದೇವಿಪ್ರಕಾಶ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ