ಹುಬ್ಬಳ್ಳಿ,ಜೂ.8-ಹಳೆ ದ್ವೇಷದ ಹಿನ್ನೆಲೆಯಲ್ಲಿ ಸ್ನೇಹಿತರಿಬ್ಬರು ಪರಸ್ಪರ ಚಾಕು ಇರಿದುಕೊಂಡು ಸಾವನ್ನಪ್ಪಿರುವ ಘಟನೆ ತಡರಾತ್ರಿ ನಗರದಲ್ಲಿ ನಡೆದಿದೆ. ಕೇಶ್ವಾಪುರ ನಿವಾಸಿ ರಿಯಾಜ್ ಸವಣೂರ(23), ಮಂಟೂರು ರಸ್ತೆಯ ಮಿಲರ್ನಗರ ನಿವಾಸಿ ಫಿರೋಜ್ ಹನಸಿ (23) ಸಾವನ್ನಪ್ಪಿರುವ ಯುವಕರು. ಇವರಿಬ್ಬರು ಸ್ನೇಹಿತರಾಗಿದ್ದು , ಹಳೆ ದ್ವೇಷದ ಹಿನ್ನೆಲೆಯಲ್ಲಿ ತಡರಾತ್ರಿ ಇಬ್ಬರ ನಡುವೆ ಜಗಳ ನಡೆದಿದೆ. ಈ ಹಂತದಲ್ಲಿ ಮಾತಿಗೆ ಮಾತು ಬೆಳೆದು ಒಬ್ಬರಿಗ್ಬೊಬ್ಬರು ಚಾಕು ಇರಿದುಕೊಂಡಿದ್ದಾರೆ. ಈ ವೇಳೆ ಫಿರೋಜ್ ಹನಸಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ರಿಯಾಜ್ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಶಹರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.