ಹಳೆ ದ್ವೇಷದ ಹಿನ್ನೆಲೆಯಲ್ಲಿ ಸ್ನೇಹಿತರಿಬ್ಬರು ಪರಸ್ಪರ ಚಾಕು ಇರಿದುಕೊಂಡು ಮೃತ

ಹುಬ್ಬಳ್ಳಿ,ಜೂ.8-ಹಳೆ ದ್ವೇಷದ ಹಿನ್ನೆಲೆಯಲ್ಲಿ ಸ್ನೇಹಿತರಿಬ್ಬರು ಪರಸ್ಪರ ಚಾಕು ಇರಿದುಕೊಂಡು ಸಾವನ್ನಪ್ಪಿರುವ ಘಟನೆ ತಡರಾತ್ರಿ ನಗರದಲ್ಲಿ ನಡೆದಿದೆ. ಕೇಶ್ವಾಪುರ ನಿವಾಸಿ ರಿಯಾಜ್ ಸವಣೂರ(23), ಮಂಟೂರು ರಸ್ತೆಯ ಮಿಲರ್‍ನಗರ ನಿವಾಸಿ ಫಿರೋಜ್ ಹನಸಿ (23) ಸಾವನ್ನಪ್ಪಿರುವ ಯುವಕರು. ಇವರಿಬ್ಬರು ಸ್ನೇಹಿತರಾಗಿದ್ದು , ಹಳೆ ದ್ವೇಷದ ಹಿನ್ನೆಲೆಯಲ್ಲಿ ತಡರಾತ್ರಿ ಇಬ್ಬರ ನಡುವೆ ಜಗಳ ನಡೆದಿದೆ. ಈ ಹಂತದಲ್ಲಿ ಮಾತಿಗೆ ಮಾತು ಬೆಳೆದು ಒಬ್ಬರಿಗ್ಬೊಬ್ಬರು ಚಾಕು ಇರಿದುಕೊಂಡಿದ್ದಾರೆ. ಈ ವೇಳೆ ಫಿರೋಜ್ ಹನಸಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ರಿಯಾಜ್ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಶಹರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ