ಜಮ್ಮು-ಕಾಶ್ಮೀರ: ಗಡಿ ನಿಯಂತ್ರಣ ರೇಖೆಯ ಬಳಿ ಒಳನುಸುಳಲು ಯತ್ನಿಸಿದ ಐವರು ಉಗ್ರರ ಹತ್ಯೆ

ಶ್ರೀನಗರ:ಜೂ-10;ಜಮ್ಮು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಬಳಿ ಒಳನುಸುಳಲು ಯತ್ನಿಸಿದ ನುಸುಳುಕೋರರ ವಿರುದ್ಧ ಸೇನಾ ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಐವರು ಉಗ್ರರನ್ನು ಸದೆಬಡಿದಿದೆ.

ಗಡಿ ನಿಯಂತ್ರಣ ರೇಖೆ ಬಳಿಕ ಕುಪ್ವಾರಾ ಜಿಲ್ಲೆಯ ಕರೆನ್‌ ಸೆಕ್ಟರ್‌ನಲ್ಲಿ ಸೇನಾ ಕಾರ್ಯಾಚರಣೆ ನಡೆಸಲಾಗಿತ್ತು. ಈ ಕಾರ್ಯಾಚರಣೆಯಲ್ಲಿ ಐವರು ಉಗ್ರರು ಹತರಾಗಿದ್ದಾರೆ.

ರಂಜಾನ್‌ ಹಿನ್ನೆಲೆಯಲ್ಲಿ ಕದನ ವಿರಾಮ ಘೋಷಿಸಿದ್ದು ಈ ಸಂದರ್ಭದಲ್ಲಿ ಉಗ್ರರು ನುಸುಳಲು ಯತ್ನಿಸಿದರು.

ಈ ಸಂದರ್ಭದಲ್ಲಿ ಸೇನಾ ಯೋಧರು ಕ್ಷಿಪ್ರ ಕಾರ್ಯಾಚರಣೆ ನಡೆಸಿದರು ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ. ಸೇನೆ ಉಗ್ರರಿಗಾರಿ ಇನ್ನಷ್ಟು ಶೋಧ ನಡೆಸಿದ್ದು, ಕಾರ್ಯಾಚರಣೆ ಮುಂದುವರಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ