ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಆರ್ ಎಸ್ ಎಸ್ ಪ್ರಧಾನ ಕಚೇರಿಗೆ ಭೇಟಿ ನೀಡಿರುವುದರ ವಿರುದ್ಧ ಕರ್ನಾಟಕದಲ್ಲಿ ಕಾಂಗ್ರೆಸ್ ಮಿತ್ರ ಪಕ್ಷವಾಗಿರುವ ಜೆಡಿಎಸ್ ತೀವ್ರ ವಾಗ್ದಾಳಿ ನಡೆಸಿದೆ.
ಆರ್ ಎಸ್ ಎಸ್ ಸಂಸ್ಥಾಪಕ ಕೇಶವ್ ಬಿ ಹೆಡಗೇವಾರ್ ಅವರನ್ನು ಭಾರತ ಮಾತೆಯ ಹೆಮ್ಮೆಯ ಪುತ್ರ ಎಂದು ಹೊಗಳಿದ ಮಾಜಿ ರಾಷ್ಟ್ರಪತಿಯನ್ನು ಜೆಡಿಎಸ್ ತರಾಟೆಗೆ ತೆಗೆದುಕೊಂಡಿದೆ.
ಪ್ರಣಬ್ ಮುಖರ್ಜಿ ಅವರು ನಾಗ್ಪುರಕ್ಕೆ ಹೋಗಬಾರದಿತ್ತು. ಅವರ ಭಾಷಣವನ್ನು ಜನ ನೆನಪಿಸಿಕೊಳ್ಳುವುದಿಲ್ಲ ಎಂದು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್ ಅಲಿ ಅವರು ಹೇಳಿದ್ದಾರೆ.
ಪ್ರಣಬ್ ಮುಖರ್ಜಿ ಅವರು ಜೂನ್ 7ರಂದು ಆರ್ ಎಸ್ ಎಸ್ ನ ತೃತೀಯ ವರ್ಷದ ಸಂಘ ಶಿಕ್ಷಾ ವರ್ಗ(ಎಸ್ ಎಸ್ ವಿ)ದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಇದು ರಾಜಕೀಯ ವಲಯದಲ್ಲಿ ಕೆಲವರು ಹುಬ್ಬೇರಿಸುವಂತೆ ಮಾಡಿತ್ತು.