
ಚಾಮರಾಜನಗರ, ಜೂ.10- ಗುಂಡ್ಲುಪೇಟೆಯ ಗ್ರಾಮವೊಂದರಲ್ಲಿ ಹುಲಿಯ ಹೆಜ್ಜೆಯ ಗುರುತುಗಳು ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಬಂಡೀಪುರ ಅರಣ್ಯ ಪ್ರದೇಶದ ಕಾಡಂಚಿನ ಗುಂಡ್ಲುಪೇಟೆ ತಾಲೂಕಿನ ರಾಘವಪುರ ಹೊರವಲಯದಲ್ಲಿ ಹುಲಿಯ ಹೆಜ್ಜೆ ಕಾಣಿಸಿಕೊಂಡಿದೆ.
ಇಂದು ಬೆಳಗ್ಗೆ ಹುಲಿಯ ಹೆಜ್ಜೆಗಳು ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.
ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಹುಲಿಗಾಗಿ ಕಾರ್ಯಾಚರಣೆ ನಡೆಸಿದ್ದಾರೆ.