ಹುಬ್ಬಳ್ಳಿ, ಜೂ.10-ಲಿಂಗಾಯತ ಧರ್ಮಕ್ಕೆ ಅಲ್ಪಸಂಖ್ಯಾತ ಸ್ಥಾನಮಾನದ ಶಿಫಾರಸನ್ನು ಕೇಂದ್ರ ಸರ್ಕಾರ ವಾಪಸ್ ಕಳುಹಿಸಿ ರಾಜಕೀಯ ಮಾಡಿದೆ ಎಂದು ಸಮುದಾಯದ ಮುಖಂಡ, ವಿಧಾನ ಪರಿಷತ್ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇಲ್ಲ. ಕೇಂದ್ರ ಸರ್ಕಾರ ಪ್ರಸ್ತಾವನೆಯನ್ನು ವಾಪಸ್ ಕಳುಹಿಸಿದ್ದರೆ ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ ಸಮಿತಿ ಸಭೆ ಸೇರಿ ನಿರ್ಧಾರ ಕೈಗೊಳ್ಳುತ್ತದೆ. ಈ ಶಿಫಾರಸನ್ನು ಕೇಂದ್ರ ಸರ್ಕಾರ ರದ್ದು ಮಾಡಬೇಕಿತ್ತು, ಇಲ್ಲವೆ ಸ್ವೀಕಾರ ಮಾಡಬೇಕಿತ್ತು. ಪ್ರಸ್ತಾವನೆಯನ್ನು ವಾಪಸ್ ಕಳುಹಿಸಿದ್ದು ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳಲು. ಈಗಲು ಸಹ ಸಮಿತಿ ವತಿಯಿಂದ ಕಾನೂನು ಹೋರಾಟ ಮಾಡುತ್ತೇವೆ. ನಾನು ಲಿಂಗಾಯತ ಧರ್ಮದಲ್ಲಿ ವೈಯಕ್ತಿಕ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಎಲ್ಲ ನಿರ್ಧಾರವನ್ನೂ ಸಮಿತಿ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.