
ಕೋಲಾರ, ಜೂ.10-ದೇವಸ್ಥಾನದ ಬಾಗಿಲು ಮುರಿದು ಒಳನುಗ್ಗಿರುವ ಕಳ್ಳರು ದೇವಿಯ ಮೇಲಿದ್ದ ಚಿನ್ನದ ತಾಳಿಯನ್ನು ದೋಚಿ ಪರಾರಿಯಾಗಿರುವ ಘಟನೆ ಬೇತಮಂಗಲ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಜಿಲ್ಲೆಯ ಕೆಜಿಎಫ್ ತಾಲೂಕಿನ ಬೇತಮಂಗಲದಲ್ಲಿರುವ ಶ್ರೀ ಆದಿಶಕ್ತಿ ಗಂಗಮ್ಮ ದೇವಿಯ ದೇವಸ್ಥಾನದ ಬಾಗಿಲು ಮುರಿದು ಒಳನುಗ್ಗಿರುವ ಕಳ್ಳರು ದೇವಿಯ ಮೈಮೇಲಿದ್ದ ಚಿನ್ನದ ತಾಳಿಯನ್ನು ಕದ್ದು ಪರಾರಿಯಾಗಿದ್ದಾರೆ.
ದೇವಸ್ಥಾನದ ಹುಂಡಿಯನ್ನು ಮಾತ್ರ ಅಲ್ಲೇ ಬಿಟ್ಟಿದ್ದಾರೆ. ಇಂದು ಬೆಳಗ್ಗೆ ದೇವಸ್ಥಾನದ ಅರ್ಚಕರಾದ ಮುನಿರಾಜು ಪೂಜೆಗೆಂದು ಬಂದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.
ಬೇತಮಂಗಲ ಠಾಣೆಯ ಸಬ್ಇನ್ಸ್ಪೆಕ್ಟರ್ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.