ಸಮ್ಮಿಶ್ರ ಸರ್ಕಾರದಲ್ಲಿ ಖಾತೆ ಬದಲಾವಣೆಗೆ ಸಂಬಂಧಿಸಿದಂತೆ ಯಾವುದೇ ತೀರ್ಮಾನವಾಗಿಲ್ಲ: ಸಿಎಂ ಸ್ಪಷ್ಟನೆ

 

ಬೆಂಗಳೂರು, ಜೂ.11-ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಖಾತೆ ಬದಲಾವಣೆಗೆ ಸಂಬಂಧಿಸಿದಂತೆ ಯಾವುದೇ ತೀರ್ಮಾನವಾಗಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ಗಾಂಧಿಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉನ್ನತ ಶಿಕ್ಷಣ ಸಚಿವರಾದ ಜಿ.ಟಿ.ದೇವೇಗೌಡ ಅವರು, ಅವರದೇ ಆದ ಸಮಸ್ಯೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಕೆಲವು ವಿಷಯಗಳಿಗೆ ಸಂಬಂಧಿಸಿದಂತೆ ನನ್ನೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಯಾವುದೇ ಸಮಸ್ಯೆಗಳಿಲ್ಲ ಎಂದರು.
ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆದಿದ್ದು, ಶೀಘ್ರದಲ್ಲೇ ಸತ್ಯಾಂಶ ತಿಳಿಯಲಿದೆ. ಹತ್ಯೆಯ ಆರೋಪಿಗಳನ್ನು ಪೆÇಲೀಸರು ಬಂಧಿಸುವ ಸಾಧ್ಯತೆ ಇದೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ