ನಡೆದು ಹೋಗುತ್ತಿದ್ದ ವ್ಯಕ್ತಿಯನ್ನು ಬೈಕ್‍ನಲ್ಲಿ ಹಿಂಬಾಲಿಸಿದ ಮೂವರು ದರೋಡೆಕೋರರು 40 ಸಾವಿರ ಹಣ ಹಾಗೂ 2 ಮೊಬೈಲ್ ಕಸಿದು ಪರಾರಿ

 

ಬೆಂಗಳೂರು, ಜೂ.11- ನಡೆದು ಹೋಗುತ್ತಿದ್ದ ವ್ಯಕ್ತಿಯನ್ನು ಬೈಕ್‍ನಲ್ಲಿ ಹಿಂಬಾಲಿಸಿದ ಮೂವರು ದರೋಡೆಕೋರರು 40 ಸಾವಿರ ಹಣ ಹಾಗೂ 2 ಮೊಬೈಲ್ ಕಸಿದು ಪರಾರಿಯಾಗಿರುವ ಘಟನೆ ಸೋಲದೇವನಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ನಿನ್ನೆ ಮುಂಜಾನೆ 5 ಗಂಟೆ ಸಮಯದಲ್ಲಿ ಚಿಕ್ಕಸಂದ್ರದಲ್ಲಿ ಗಣೇಶ್ ಎಂಬುವವರು ನಡೆದು ಹೋಗುತ್ತಿದ್ದರು.
ಈ ಸಂದರ್ಭದಲ್ಲಿ ಬೈಕ್‍ನಲ್ಲಿ ಹಿಂಬಾಲಿಸಿಕೊಂಡು ಬಂದ ಮೂವರು ದರೋಡೆಕೋರರು ಗಣೇಶ್ ಅವರನ್ನು ಅಡ್ಡಗಟ್ಟಿ, ಬೆದರಿಸಿ ಅವರ ಬಳಿಯಿದ್ದ 40 ಸಾವಿರ ಹಣ ಹಾಗೂ 2 ಮೊಬೈಲ್ ಕಸಿದು ಪರಾರಿಯಾಗಿದ್ದಾರೆ.
ಈ ಸಂಬಂಧ ಗಣೇಶ್ ಅವರು ಸೋಲದೇವನಹಳ್ಳಿ ಠಾಣೆಗೆ ದೂರು ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡು ದರೋಡೆಕೋರರಿಗಾಗಿ ಪೆÇಲೀಸರು ಶೋಧ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ