ಬೆಂಗಳೂರು, ಜೂ.11-ಬೈಕ್‍ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಅವರು ಸಾವನ್ನಪ್ಪಿರುವ ಘಟನೆ ಕೆಂಗೇರಿ ಸಂಚಾರಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.
ಕೆಂಗೇರಿ ಬಾಪೂಜಿ ಕಾಲೋನಿಯ ವಿದ್ಯಾಪೀಠ ರಸ್ತೆ ನಿವಾಸಿ ವಿ.ಅಶೋಕ್ ಮೃತಪಟ್ಟ ಬೈಕ್ ಸವಾರ.
ಇಂದು ಬೆಳಗ್ಗೆ 8.15ರಲ್ಲಿ ಕೆಂಗೇರಿ ಉಪನಗರದ ಸುರಾನಾ ಕಾಲೇಜು ಸಮೀಪ ಅಶೋಕ್ ಎಂಬುವರು ಬೈಕ್‍ನಲ್ಲಿ ಹೋಗುತ್ತಿದ್ದರು.
ಈ ಸಂದರ್ಭದಲ್ಲಿ ಅತಿ ವೇಗವಾಗಿ ಮುನ್ನುಗ್ಗಿದ ಕ್ಯಾಂಟರ್ ಇವರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಅಶೋಕ್ ಗಂಭೀರ ಗಾಯಗೊಂಡರು.
ತಕ್ಷಣ ಸಾರ್ವಜನಿಕರು ಗಾಯಾಳು ಅಶೋಕ್ ಅವರನ್ನು ಆಸ್ಪತ್ರೆಗೆ ಕರೆದೊಯ್ದರಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಮೃತದೇಹವನ್ನು ರಾಜರಾಜೇಶ್ವರಿ ನಗರ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ.
ಕೆಂಗೇರಿ ಸಂಚಾರಿ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.