ವಿವಿಧೆಡೆ ಕೆರೆ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

 

ಬೆಂಗಳೂರು, ಜೂ.11- ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಇಂದು ನಗರದ ವಿವಿಧೆಡೆ ಕೆರೆ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳೀಯರ ಸಮಸ್ಯೆಗಳನ್ನು ಆಲಿಸಿ ಅಧಿಕಾರಿಗಳಿಗೆ ಕೆಲ ಸೂಚನೆಗಳನ್ನು ನೀಡಿದರು.
ಬೆಂಗಳೂರು ಅಭಿವೃದ್ಧಿ ಖಾತೆಯನ್ನು ಹೊಂದಿರುವ ಪರಂ ಅವರೊಂದಿಗೆ ಮೇಯರ್ ಸಂಪತ್‍ರಾಜ್ ಕೂಡ ಸಾಥ್ ನೀಡಿದರು.

ಮೊದಲು ಸಿವಿ ರಾಮನ್ ನಗರ ಕ್ಷೇತ್ರದ ಕಗ್ಗದಾಸಪುರ ಕೆರೆ ತಪಾಸಣೆ ನಡೆಸಿ ಬಳಿಕ ಭಾರೀ ಸುದ್ದಿಗೆ ಗ್ರಾಸವಾಗಿದ್ದ ಬೆಳ್ಳಂದೂರು ಕೆರೆ ಪ್ರದೇಶಕ್ಕೆ ಭೇಟಿ ನೀಡಿದಾಗ ಸ್ಥಳೀಯರು ಹೂಳು ತೆಗೆಯುವುದು, ಮಳೆ ನೀರುಗಾಲುವೆ , ಶುಚಿತ್ವ , ಒತ್ತುವರಿ ತೆರವು ಸೇರಿದಂತೆ ಹಲವು ಸಮಸ್ಯೆಗಳನ್ನು ತಿಳಿಸಿದರು.
ಈ ವೇಳೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಇದರ ಬಗ್ಗೆ ಕೂಡಲೇ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಕಗ್ಗದಾಸನಪುರ ಕೆರೆಯ ವ್ಯಾಪ್ತಿಯಲ್ಲಿ ಸುಮಾರು 11 ಎಕರೆ ಒತ್ತುವರಿಯಾಗಿದೆ. ಕೆರೆಯ ಅಭಿವೃದ್ಧಿಗಾಗಿ ಸುಮಾರು 2 ಕೋಟಿಗೂ ಹೆಚ್ಚು ಹಣ ವೆಚ್ಚ ಮಾಡಲಾಗಿದ್ದು, ಯಾವುದೇ ಪ್ರಗತಿ ಕಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬಂದ ದೂರುಗಳನ್ನು ಸಮಗ್ರವಾಗಿ ಪರಿಶೀಲಿಸಿ ನಂತರ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಪರಮೇಶ್ವರ್ ಅವರು ಸುದ್ದಿಗಾರರಿಗೆ ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ