ನಿರಂತರವಾಗಿ ಸುರಿಯುತ್ತಿರುವ ಮಳೆ: ಚಾರ್ಮಡಿಘಾಟ್ ನಲ್ಲಿ ಗುಡ್ಡ ಕುಸಿತ; ವಾಹನ ಸಂಚಾರ ಸ್ಥಗಿತ

Land slide caused due to heavy rainfalls at Charmadi Ghat blocking the Chikmagalore-Mangalore and Dharmasthala roadways on Sunday. --KPN

ಮಂಗಳೂರು:ಜೂ-12: ನಿರಂತರ ಮಳೆಯಿಂದಾಗಿ ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತಗೊಂಡಿದ್ದು,ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಸೋಮವಾರ ರಾತ್ರಿ ಗುಡ್ಡ ಕುಸಿತ ಉಂಟಾಗಿದ್ದು, ಚಾರ್ಮಾಡಿ ಘಾಟ್‌ನಲ್ಲಿ ಪ್ರಯಾಣಿಕರು ಸಿಲುಕಿಕೊಂಡು ಸಂಕಷ್ಟಕ್ಕೀದಾಗಿದ್ದಾರೆ. ನೀರು, ತಿಂಡಿ‌ ಸಿಗದೇ ಮಕ್ಕಳು, ದೊಡ್ಡವರು ಪರದಾಡುವಂತಾಗಿದೆ.

ಚಾರ್ಮಡಿ ಘಾಟ್ ನ ಒಟ್ಟು 9 ಕಡೆ ಗುಡ್ಡ ಕುಸಿದಿದ್ದು. ಇನ್ನು‌ ಕೆಲವೆಡೆ ಗುಡ್ಡ ಕುಸಿಯುವ ಆತಂಕ ಎದುರಾಗಿದೆ. ಒಂದು ಕಡೆಯ ಮಣ್ಣನ್ನು ತೆರವು ಮಾಡುತ್ತಿದ್ದಂತೆ, ಮತ್ತೊಂದು ಕಡೆ ಮಣ್ಣು ಕುಸಿಯುತ್ತಿದೆ.

ರಸ್ತೆಯ ಇಕ್ಕೆಲಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ಮಣ್ಣು ತೆರವಿಗೆ ಜೆಸಿಬಿ, ಹಿಟಾಚಿಗಳನ್ನು ಸ್ಥಳಕ್ಕೆ ತರಲಾಗಿದ್ದು, ತೆರವು ಕಾರ್ಯಾಚರಣೆ ಮುಂದುವರಿದಿದೆ. ಮಳೆ ನಿರಂತರವಾಗಿ ಸುರಿಯುತ್ತಿರುವುದರಿಂದ ಕಾರ್ಯಾಚರಣೆಗೆ ತೊಂದರೆ ಆಗುತ್ತಿದೆ. ಆದರೂ ಮಣ್ಣು ತೆರವು ಮಾಡಲು‌ ನಿರಂತರ ಕೆಲಸ ಮಾಡಲಾಗುತ್ತಿದೆ. ಮಣ್ಣು ಕುಸಿತದಿಂದ ಹಾಸನ ಮಾರ್ಗದ ರೈಲು ಸಂಚಾರ‌ ಸೋಮವಾರದಿಂದ ಸ್ಥಗಿತಗೊಂಡಿತ್ತು, ಈಗ ರಸ್ತೆ ಸಂಚಾರವೂ ಸ್ಥಗಿತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾರ್ಗ ಬದಲಾವಣೆ:
ಮಳೆಯಿಂದಾಗಿ ಮಣ್ಣು ತೆರವು ಕಾರ್ಯ ವಿಳಂಬ ಆಗುತ್ತಿದೆ. ಹೀಗಾಗಿ ವಾಹನಗಳಿಗೆ ಪರ್ಯಾಯ ಮಾರ್ಗದಲ್ಲಿ ಸಂಚರಿಸುವುದು ಅನಿವಾರ್ಯವಾಗಿದೆ. ಚಿಕ್ಕಮಗಳೂರಿನಿಂದ ಮಂಗಳೂರಿಗೆ ಬರುವ ವಾಹನಗಳು ಕೊಟ್ಟಿಗೆಹಾರದಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ.

ಮಂಗಳೂರಿನಿಂದ ಚಿಕ್ಕಮಗಳೂರಿನ ಕಡೆಗೆ ಹೋಗುವ ವಾಹನಗಳು ಉಜಿರೆಯಿಂದ ಕುದುರೆಮುಖ‌ ಮಾರ್ಗವಾಗಿ‌ ಸಂಚರಿಸಲು‌ ಪೊಲೀಸರು ವ್ಯವಸ್ಥೆ ಮಾಡಿದ್ದಾರೆ.

ಜನರಿಗೆ ಕೆಲವೆಡೆ ಉಪಾಹಾರದ‌ ವ್ಯವಸ್ಥೆ ಮಾಡಲಾಗಿದೆ. ವಾಹನಗಳು ಸರದಿಯಲ್ಲಿ ನಿಂತಿದ್ದು, ಜನರ ಸಂಖ್ಯೆ ಹೆಚ್ಚಾಗಿದೆ. ಎಲ್ಲರಿಗೂ ತಿಂಡಿ, ನೀರು ಒದಗಿಸುವುದು ಕಷ್ಟಕರವಾಗಿದೆ.

Heavy Rain,Landslides,Charmadi Ghat

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ