ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಸ್ಥಿರ

ನವದೆಹಲಿ, ಜೂ.12-ಅನಾರೋಗ್ಯ ಸಮಸ್ಯೆಗಳಿಂದಾಗಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಮೂತ್ರನಾಳ, ಕೆಳ ಉಸಿರಾಟ ಮಾರ್ಗ ಸೋಂಕು ಹಾಗೂ ಮೂತ್ರಪಿಂಡ ಸಮಸ್ಯೆಗಳಿಂದ ನಿನ್ನೆ 93 ವರ್ಷದ ವಾಜಪೇಯಿ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅವರ ಆರೋಗ್ಯ ಸ್ಥಿರವಾಗಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅವರಿಗೆ ಸೋಂಕು ಪ್ರತಿರೋಧಕ ಲಸಿಕೆ ನೀಡಲಾಗಿದೆ. ಅವರ ಎಲ್ಲ ಪ್ರಮುಖ ಅಂಗಗಳು ಸ್ಥಿರವಾಗಿವೆ. ಸೋಂಕು ಸಂಪೂರ್ಣ ನಿಯಂತ್ರಣಕ್ಕೆ ಬರುವ ತನಕ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗುವುದು ಎಂದು ಏಮ್ಸ್ ಆಸ್ಪತ್ರೆ ಹೇಳಿಕೆ ತಿಳಿಸಿದೆ.
ಏಮ್ಸ್ ನಿರ್ದೇಶಕ ಡಾ. ರಣದೀಪ್ ಗುಲೆರಿಯಾ ನೇತೃತ್ವದ ತಜ್ಞ ವೈದ್ಯರ ತಂಡ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಿದೆ. ನಿನ್ನೆ ಅವರನ್ನು ಡಯಾಲಿಸಿಸ್‍ಗೆ ಒಳಪಡಿಸಲಾಯಿತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ