
ಸಿಂಗಾಪುರ:ಜೂ-12: ವಿಶ್ವಾದ್ಯಂತ ತೀವ್ರ ಕುತೂಹಲಕ್ಕೆ ಕಾರಣವಾದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅವರ ಐತಿಹಾಸಿಕ ಭೇಟಿಗೆ ಸಿಂಗಾಪುರ ಸಾಕ್ಷಿಯಾಗಿದ್ದು, ವಿಶ್ವದ ಬದ್ಧ ವೈರಿಗಳೆಂದೇ ಕರೆಯಲ್ಪಡುತ್ತಿದ್ದ ಉಬಯ ದೇಶಗಳ ಅಧ್ಯಕ್ಷರು ಪರಸ್ಪರ ಭೇಟಿಯಾಗಿದ್ದಾರೆ.
ಸಿಂಗಾಪುರದ ಸೆಂಟೋಸಾ ದ್ವೀಪದಲ್ಲಿರುವ ಕ್ಯಾಪೆಲ್ಲಾ ಹೋಟೆಲ್ನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಉತ್ತರ ಕೊರಿಯಾ ಅಧ್ಯಕ್ಷ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಮುಖಾಮುಖಿಯಾಗಿದ್ದು, ಹಸ್ತಲಾಘವದ ಮೂಲಕ ಪರಸ್ಪರ ಸ್ವಾಗತ ಕೋರಿದ್ದಾರೆ.
ಈ ಐತಿಹಾಸಿಕ ದ್ವಿಪಕ್ಷೀಯ ಸಭೆಯಲ್ಲಿ ಭಾಷಾಂತರಕಾರರ ನೆರವಿನಿಂದ ಉಭಯ ನಾಯಕರು ಚರ್ಚೆ ನಡೆಸಿದರು.
ಉತ್ತರ ಕೊರಿಯಾ ಈ ಹಿಂದೆ ಅಣ್ವಸ್ತ್ರ ಪರೀಕ್ಷೆ ಮೂಲಕ ವಿಶ್ವದ ದೊಡ್ಡಣ್ಣಗೆ ಸೆಡ್ಡು ಹೊಡೆದಿತ್ತು. ಆಗ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅವರಿಗೆ ಟ್ರಂಪ್ ಸರ್ವನಾಶದ ಎಚ್ಚರಿಕೆ ನೀಡಿದ್ದರು. ಸದ್ಯ ಎರಡು ರಾಷ್ಟ್ರಗಳ ಅಧ್ಯಕ್ಷರು ಪ್ರತ್ಯೇಕ ಸಭೆ ನಡೆಯುತ್ತಿದೆ.
Donald Trump and Kim Jong-un summit